ರಾಜ್ಯ

ಕರಾವಳಿ ಆಳಸಮುದ್ರ ಗಣಿಗಾರಿಕೆ: ಟೆಂಡರ್‌ ರದ್ದುಪಡಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ರಾಹುಲ್‌ ಪತ್ರ

ನವದೆಹಲಿ: ಗುಜರಾತ್‌, ಕೇರಳ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಕರಾವಳಿಯಲ್ಲಿನ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ವಿಪಕ್ಷ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ.

ಈ ಕುರಿತು ತಮ್ಮ ವಾಟ್ಸಾಪ್‌ ಚಾನೆಲ್‌ನಲ್ಲಿ ಮಾಹಿತಿ ನೀಡಿರುವ ಅವರು, ಸ್ಥಳೀಯರೊಂದಿಗೆ ಸಮಾಲೋಚಿಸದೆ, ಪರಿಸರದ ಮೇಲಿನ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸದೆ ಆಳಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾನು ದೇಶದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಕರಾವಳಿ ಸಮುದಾಯಗಳು, ಪರಿಸರದ ಮೇಲಿನ ಪರಿಣಾಮವನ್ನು ನಿರ್ಣಯಿಸದೇ ಗಣಿಗಾರಿಕೆಗೆ ಟೆಂಡರ್‌ ಆಹ್ವಾನಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಅಲ್ಲದೇ ಗಣಿಗಾರಿಕೆ ಪರಿಣಾಮಗಳ ಬಗ್ಗೆ ಚಿಂತಿಸದೆ ಖಾಸಗಿ ಕಂಪೆನಿಗಳಿಗೆ ಗಣಿಗಾರಿಕೆ ಮಾಡಲು ಅನುಮತಿಸುವುದು ಕಡಲ ಜೀವಗಳಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇನ್ನು ಲಕ್ಷಾಂತರ ಮೀನುಗಾರರು ತಮ್ಮ ಜೀವನೋಪಾಯ ಮೇಲೆ ಇದರ ಪರಿಣಾಮದ ಕುರಿತು ತೀವ್ರ ಕಳವಳ ವ್ಯಕ್ತವಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ತನ್ನ ನಿರ್ಧಾರವನ್ನು ವಾಪಾಸ್‌ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

1 hour ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

7 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

7 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

8 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

9 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

15 hours ago