ರಾಜ್ಯ

ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ಸ್ಥಳದಲ್ಲಿ ಮತ್ತೊಬ್ಬ ಉದ್ಯಮಿ ಸಾವಿಗೆ ಶರಣು

ಮಂಗಳೂರು : ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ.

ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.

ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ  ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ‌ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ.

2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು. 2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

12 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

23 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

30 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

33 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

36 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

38 mins ago