ರಾಜ್ಯ

ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯೂ ನಡೆಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಆಯ್ದ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಇವುಗಳ ಸಂಖ್ಯೆಗೆ ಕಡಿವಾಣ ಹಾಕುವ ಅಗತ್ಯವೂ ಕಂಡು ಬರುತ್ತಿದೆ. ವನ್ಯಜೀವಿಗಳ ಸಂರಕ್ಷಣೆಯೂ ಆಗಬೇಕು. ಅಮೂಲ್ಯವಾದ ಜೀವಹಾನಿಯೂ ತಪ್ಪಬೇಕು. ಮಾನವರ ಜೀವ ಉಳಿಸುವ ಕೆಲಸವೂ ಆಗಬೇಕಿದೆ.

ಇದು ನಿರ್ಧಾರವಲ್ಲ, ಒಂದು ಚಿಂತನೆ ಮಾತ್ರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುವ ಅಗತ್ಯವಿದೆ. ಜೊತೆಗೆ ತತ್ಸಂಬಂಧವಾದ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದ್ದು, ತಜ್ಞರು, ಕಾನೂನು ಪಂಡಿತರೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆಯೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗುತ್ತದೆ ಎಂದರು.

ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು ಎಂದ ಅವರು, ಯಾವ ಭಾಗದಲ್ಲಿ ಯಾವ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತದೋ ಅಲ್ಲಿ ಒಂದೆರೆಡು ವರ್ಷ ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಬೇರೆ ಬೇರೆ ರಾಜ್ಯಗಳಲ್ಲೂ ಇಂತಹ ಆಲೋಚನೆ, ಚಿಂತನೆ ಇದೆ. ಈ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯುವ ಅಗತ್ಯವಿದೆ ಎಂದರು.

ಸ್ವಯಂ ಇಚ್ಛೆಯಿಂದ ಕಾಡಿನಿಂದ ಹೊರಬರಲು ಇಚ್ಛಿಸುವ ಅರಣ್ಯವಾಸಿಗಳ ಸ್ಥಳಾಂತರದ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಆ ರೀತಿ ಸ್ವಯಂ ಪ್ರೇರಣೆಯಿಂದ ಹೊರಬರುವವರ ಪಟ್ಟಿ ಸಿದ್ಧಪಡಿಸಲು ತಿಳಿಸಿದ್ದು, ಪಟ್ಟಿ ಸಿದ್ಧವಾದ ಬಳಿಕ ಎಷ್ಟು ಹಣದ ಅಗತ್ಯ ಬರುತ್ತದೆ. ಆಯವ್ಯಯದಲ್ಲಿ ಎಷ್ಟು ಹಣ ನೀಡಲಾಗಿದೆ. ಎಷ್ಟು ಕೊರತೆ ಆಗುತ್ತದೆ ಎಂಬ ಬಗ್ಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಈ ರೀತಿ ಅರಣ್ಯದಲ್ಲಿರುವ ವಸತಿಪ್ರದೇಶಗಳನ್ನು ಸ್ಥಳಾಂತರಿಸುವುದರಿಂದ ವನ್ಯಜೀವಿಗಳ ಆವಾಸ್ಥಾನ ವಿಸ್ತರಣೆ ಆಗುತ್ತದೆ. ಮೂಲಭೂತ ಸೌಕರ್ಯ ಇಲ್ಲದೆ ಬದುಕುತ್ತಿರುವ ಅರಣ್ಯವಾಸಿಗಳನ್ನೂ ಸಮಾಜದ ಮುಖ್ಯವಾಹಿನಿಗೆ ತಂದಂತೆ ಆಗುತ್ತದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.

ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಈಶ್ವರ ಖಂಡ್ರೆ ಸಂತಾಪ:

ಇಂದು ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಮಾನವ- ಆನೆ ಸಂಘರ್ಷ ತಡೆಯಲು ಸರ್ಕಾರ ಮತ್ತು ಇಲಾಖೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದೆ. ಜೀವಕ್ಕೆ ಬೆಲೆ ನೀಡಲು ಸಾಧ್ಯವೆ ಇಲ್ಲ. ಈ ನೋವಿನ ಸಂದರ್ಭದಲ್ಲಿ ನೊಂದ ಕುಟುಂಬದ ಜೊತೆ ಸರ್ಕಾರ ಇದೆ ಎಂದು ಹೇಳಿದರು.

ಆನೆಗಳ ಸಮಸ್ಯೆ ಪರಿಹರಿಸಲು ಆನೆ ಧಾಮ ಮಾಡುವ ಬಗ್ಗೆ ಸರ್ಕಾರ ಯೋಜನೆ ರೂಪಿಸಿತ್ತು. ಅದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗುವಲ್ಲಿ ತೊಡಕಾಗಿದೆ. ಈ ಸಮಸ್ಯೆ ಪರಿಹರಿಸಿಕೊಂಡು ಆನೆ ಧಾಮ ನಿರ್ಮಾಣದ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

9 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago