Mysore
36
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಶೀತಗಾಳಿ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಶೀತಗಾಳಿ ಹಾಗೂ ಚಳಿಯ ಪ್ರಮಾಣ ಹೆಚ್ಚಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ಮೈಕೊರೆವ ಚಳಿ ಜೊತೆಗೆ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗಾಳಿ, ಮೈಕೊರೆವ ಚಳಿ ಪ್ರಮಾಣ ಹೆಚ್ಚಿದ್ದು, ತಾಪಮಾನ 14 ಡಿಗ್ರಿಗೆ ಕುಸಿದಿದೆ. ಜನರು ಬೆಚ್ಚನೆಯ ಉಡುಪು ಧರಿಸುವಂತೆ ಹಾಗೂ ಸಮತೋಲಿತ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಾವಣಗೆರೆ, ಮಂಡ್ಯ, ರಾಮನಗರ, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Tags:
error: Content is protected !!