ರಾಜ್ಯ

ರಾಜ್ಯದಲ್ಲೂ ಕೋಲ್ಡ್ರಿಫ್ ಸಿರಪ್ ನಿಷೇಧ!

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ.

ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ (ಕೆಎಫ್‌ಆರ್‌ಡಿಎ) ಎಲ್ಲ ಸಗಟು ಮಾರಾಟಗಾರರ, ಔಷಧ ವ್ಯಾಪಾರಿಗಳು ಮತ್ತು ವಿತರಕರುಗಳಿಗೆ ಪತ್ರ ಬರೆದಿದ್ದು, ಕೋಲ್ಡ್ರಿಫ್ ಕಾಫ್ ಸಿರಪ್ ಮಾರಾಟ ಮಾಡದಂತೆ ಸೂಚನೆ ನೀಡಿದೆ. ಜೊತೆಗೆ ಡೈಎಥಿಲೀನ್ ಗ್ಲೈಕಾಲ್ ಕಂಟೇಟ್ ಕಾಫ್ ಸಿರಪ್ ತಡೆಗೂ ಸೂಚಿಸಲಾಗಿದೆ.

ಇದನ್ನೂ ಓದಿ:-ರಾಜ್ಯದಲ್ಲೂ ಕೋಲ್ಡ್ರಿಫ್ ಸಿರಪ್ ನಿಷೇಧ!

ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳನಾಡಿನಲ್ಲೂ ನಿಷೇಧ ಮಾಡಲಾಗಿದೆ. ಎಲ್ಲಾ ಸ್ಟಾಕ್‌ಗಳನ್ನೂ ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮುಂದಿನ ಸರ್ಕಾರದ ಆದೇಶದವರೆಗೆ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕಾಫ್ ಸಿರಫ್ ಮಾರಾಟ ಮಾಡದಂತೆ ತಿಳಿಸಲಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಮಾರಾಟಗೊಂಡಿರುವ ಕೋಲ್ಡ್ರಿಫ್ ಸಿರಪ್‌ನ ಪ್ರಸ್ತುತ ಸ್ಟಾಕ್ ವಿವರಗಳನ್ನು ಡ್ರಗ್ಸ್ ಕಂಟ್ರೋಲ್ ಇಲಾಖೆಗೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.

ಮಕ್ಕಳ ಸಾವುಗಳ ಬೆನ್ನಲ್ಲೇ ಕಾಫ್ ಸಿರಪ್ ಬಳಕೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಎರಡು ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡದಂತೆ ವೈದ್ಯರಿಗೆ ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

14 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago