ರಾಜ್ಯ

ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಶೀತಲ ಸಮರ ಉತ್ತುಂಗಕ್ಕೇರಲಿದೆ: ವಿಜಯೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. ಈಗ ಕಾಂಗ್ರೆಸ್ ಪಕ್ಷದ ಒಳಗಡೆಯೇ ಮಹಾಯುದ್ಧವಾಗಲಿದೆ. ರಾಜ್ಯದ ಜನರು ಶೀಘ್ರ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ‘ ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ನಡುವಿನ ಈ ಆಂತರಿಕ ಕಿತ್ತಾಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಆದರೆ ಬಿಜೆಪಿ ಮತ್ತೆ ಗೆದ್ದು ಬರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರಗಾಲ ಇದ್ದರೂ ಪರಿಹಾರ ಕಾರ್ಯಗಳತ್ತ ಗಮನ ನೀಡದೇ ಆಂತರಿಕ ಕಿತ್ತಾಟದಲ್ಲಿ ತೊಡಗಿರುವ ಕಾಂಗ್ರೆಸ್‌ನವರಿಗೆ ಜನ ಶಾಪ ಹಾಕುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾ ಬೈಯುತ್ತಿದ್ದರೆ ಕೇಂದ್ರದಿಂದ ಅನುದಾನ ಸಿಗುತ್ತಾ ಎಂದು ಯಡಿಯೂರಪ್ಪ ಅವರು ಹೇಳಿರುವುದು ಸರಿಯಾಗಿದೆ. ಪ್ರಧಾನಿ ಟೀಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗೊಲ್ಲ. ಬದಲಿಗೆ ರೈತಾಪಿ ವರ್ಗಕ್ಕೆ, ಜನಸಾಮಾನ್ಯರಿಗೆ ಅನಾನುಕೂಲವಾಗಲಿದೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಸಮಯದಲ್ಲಿ ಕಾಂಗ್ರೆಸ್‌ನಿಂದ ಹೋಗಿದ್ದ ಶಾಸಕರಿಗೆ ತಲಾ ರೂ.50 ಕೋಟಿ ಕೊಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಹೇಳಿಕೆಯೇ ಹಾಸ್ಯಾಸ್ಪದ ಎಂದು ಪ್ರಶ್ನೆಯೊಂದಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದರು.

andolanait

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

4 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

4 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

5 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

6 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

7 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

8 hours ago