ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. ಈಗ ಕಾಂಗ್ರೆಸ್ ಪಕ್ಷದ ಒಳಗಡೆಯೇ ಮಹಾಯುದ್ಧವಾಗಲಿದೆ. ರಾಜ್ಯದ ಜನರು ಶೀಘ್ರ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ‘ ಎಂದು ಹೇಳಿದರು.
ಕಾಂಗ್ರೆಸ್ ನಾಯಕರ ನಡುವಿನ ಈ ಆಂತರಿಕ ಕಿತ್ತಾಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಆದರೆ ಬಿಜೆಪಿ ಮತ್ತೆ ಗೆದ್ದು ಬರಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬರಗಾಲ ಇದ್ದರೂ ಪರಿಹಾರ ಕಾರ್ಯಗಳತ್ತ ಗಮನ ನೀಡದೇ ಆಂತರಿಕ ಕಿತ್ತಾಟದಲ್ಲಿ ತೊಡಗಿರುವ ಕಾಂಗ್ರೆಸ್‌ನವರಿಗೆ ಜನ ಶಾಪ ಹಾಕುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾ ಬೈಯುತ್ತಿದ್ದರೆ ಕೇಂದ್ರದಿಂದ ಅನುದಾನ ಸಿಗುತ್ತಾ ಎಂದು ಯಡಿಯೂರಪ್ಪ ಅವರು ಹೇಳಿರುವುದು ಸರಿಯಾಗಿದೆ. ಪ್ರಧಾನಿ ಟೀಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗೊಲ್ಲ. ಬದಲಿಗೆ ರೈತಾಪಿ ವರ್ಗಕ್ಕೆ, ಜನಸಾಮಾನ್ಯರಿಗೆ ಅನಾನುಕೂಲವಾಗಲಿದೆ ಎಂದರು.
ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಸಮಯದಲ್ಲಿ ಕಾಂಗ್ರೆಸ್‌ನಿಂದ ಹೋಗಿದ್ದ ಶಾಸಕರಿಗೆ ತಲಾ ರೂ.50 ಕೋಟಿ ಕೊಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಹೇಳಿಕೆಯೇ ಹಾಸ್ಯಾಸ್ಪದ ಎಂದು ಪ್ರಶ್ನೆಯೊಂದಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…