Mysore
25
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ ಚಳಿ ಪ್ರಮಾಣವು ಹೆಚ್ಚಾಗಿದೆ. ಶೀತದಲೆಯ ಹಿನ್ನೆಲೆಯಲ್ಲಿ ಕಲಬುರ್ಗಿ, ಬೀದರ್‌ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲೆಗಳಲ್ಲಿಯೂ ಒಣಹವೆ ಚಳಿ ಮುಂದುವರಿಯಲಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಒಣಹವೆ ಇದ್ದು ಇಂದೂ ಕೂಡ ಒಣಹವೆ ಮುಂದುವರಿಯಲಿದೆ.

 

Tags:
error: Content is protected !!