Mysore
27
few clouds

Social Media

ಗುರುವಾರ, 15 ಜನವರಿ 2026
Light
Dark

ದಕ್ಷಿಣ ಒಳನಾಡಿನಲ್ಲಿ ತಗ್ಗಿದ ಚಳಿ ಅಬ್ಬರ: ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು ರೀತಿಯ ಮಿಶ್ರ ಹವಾಮಾನವಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ಕಡಿಮೆಯಾಗಿದೆ. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶಿತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದ ಬೀದರ್‌, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ.

ಈ ಜಿಲ್ಲೆಗಳಲ್ಲಿ ತಾಪಮಾನ ವಾಡಿಕೆಗಿಂತ ಕಡಿಮೆಯಾಗಲಿದೆ. ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಶುಷ್ಕ ಹವೆ ಇರಲಿದೆ.

 

Tags:
error: Content is protected !!