ಬೆಂಗಳೂರು : ನವಿಲುಗಳಿಂದ ನೈಸರ್ಗಿಕ ವಾಗಿ ಉದುರಿದ ಗರಿಗಳನ್ನು ಸಂಗ್ರಹಿಸುವುದು, ದೇಶದೊಳಗೆ ಮಾರುವುದು ಕಾನೂನುಬಾಹಿರ ಅಲ್ಲ. ಈ ಬಗ್ಗೆ ವನ್ಯಜೀವಿ ಸಂರಕ್ಷಣ ಕಾಯ್ದೆ ಸೆಕ್ಷನ್ 43ರ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತರಾಷ್ಟ್ರೀಯ ವ್ಯಾಪಾರದ ಸಮಾವೇಶ – ಸಿಐಟಿಇಎಸ್ ನಿಷೇಧಿಸಿದೆ. ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು ಶಿಕ್ಷಾರ್ಹ ಅಪರಾಧ ಎಂದಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತು ಸೂಚನೆ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳೇ ವನ್ಯ ಜೀವಿಗಳ ಉತ್ಪನ್ನ ಬಳಕೆ ಮಾಡುತ್ತಿದ್ದಾರೆ ಎಂದಾದರೆ ಅಕ್ಷಮ್ಯ ಅಪರಾಧ ಎಂದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…