Mysore
31
overcast clouds

Social Media

ಶನಿವಾರ, 23 ಮೇ 2026
Light
Dark

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ಮೃತಪಟ್ಟವರನ್ನು ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದವರಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಎಂದು ಗುರುತಿಸಲಾಗಿದೆ.

ಕ್ರೂಸರ್ ವಾಹನದಲ್ಲಿ ಐದು ಮಂದಿ ಕುಟುಂಬ ಸದಸ್ಯರೆಲ್ಲರೂ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ವಾಹನವನ್ನು ತೋಲುಸಾಬ್ ಕ್ಯಾಶ್ವಾರ್ ಚಾಲನೆ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ತಡರಾತ್ರಿ 12.30 ರ ಸುಮಾರಿಗೆ ಕ್ರೂಸರ್ ವಾಹನದಲ್ಲಿ ಇಂಗಳಗಿಗೆ ವಾಪಸ್ ಆಗುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ 150ರ ಲಾಡ್ಲಾಪುರ ಗ್ರಾಮದ ಬಳಿ ಅತೀ ವೇಗವಾಗಿ ಬಂದ ಲಾರಿ ಕ್ರೂಸರ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿದ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.‌

ಕ್ರೂಸರ್ ವಾಹನದೊಳಗೆ ಸಿಕ್ಕಿಕೊಂಡಿದ್ದ ಐವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಒಂದೇ ಕುಟುಂಬದ ಐವರು ಸದಸ್ಯರು ಪ್ರಾಣ ಕಳೆದುಕೊಂಡಿರುವುದರಿಂದ ಇಂಗಳಗಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Tags:
error: Content is protected !!