ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್ ಸ್ಮೋಕ್ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್ ಎಂಬ ಯುವಕ ಕೂಡಾ ಸೇರಿದ್ದಾನೆ.
ಈ ಯುವಕ ಮಾಡಿದ ತಪ್ಪಿನ ಕಾರಣದಿಂದ ಅವರ ಕುಟುಂಬದವರಿಗೂ ಸಂಕಷ್ಟ ಎದುರಾಗಿದೆ.
ಶುಕ್ರವಾರ ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದರು.
ಇದೀಗ ಮನೋರಂಜನ್ ಪೋಷಕರಿಗೆ ಸೂಚನೆ ನೀಡಲಾಗಿದೆ. ಮನೋರಂಜನ್ ಕುಟುಂಬಸ್ಥರು ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಸೂಚನೆ ಕೊಡಲಾಗಿದೆ.
ನಮ್ಮ ಸೂಚನೆ ಸಿಗುವವರೆಗೂ ನೀವು ಮೈಸೂರಿನಲ್ಲಿರೇ ಇರಬೇಕು. ಮೈಸೂರು ಬಿಟ್ಟು ಎಲ್ಲೂ ಹೋಗಬಾರದು. ಒಂದು ವೇಳೆ ತೀರಾ ತುರ್ತು ಪರಿಸ್ಥಿತಿ ಇದ್ದರೆ ನಮ್ಮ ಗಮನಕ್ಕೆ ತಂದು, ನಮ್ಮ ಅನುಮತಿ ಪಡೆದೇ ಮೈಸೂರಿನಿಂದ ಹೊರಹೋಗಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.
ಇನ್ನು ನಿಮಗೆ ಯಾವುದೇ ಕರೆ ಬಂದರೂ ಅವುಗಳನ್ನು ಸ್ವೀಕಾರ ಮಾಡಿ. ಹಾಗೆಯೇ ಎಲಿಂದ ಕರೆ ಬಂತು ಎಂಬ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ ಎಂದು ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…