ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿದರು.
ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ ಅಡೆತಡೆಗಳು ಇವೆ. ಅದನ್ನು ಸಡಿಲಗೊಳಿಸಿ ಎಂದು ಮನವಿ ಮಾಡಿದರು.
ಈ ವೇಳೆ ಸ್ಪೀಕರ್ ಮಾತನಾಡಿ, ಮೊದಲು ಆ ರೀತಿ ಇರಲಿಲ್ಲ. 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ನಿಯಮ ತಂದರು. ಈಗ ಎಲ್ಲಾ ಕಡೆ ಅಧಿಕಾರಿಗಳು ಈ ರೀತಿಯ ನಿಯಮ ಮಾಡುತ್ತಿದ್ದಾರೆ. ಸರ್ಕಾರ ಸರಿಪಡಿಸಿ ಎಂದು ಸೂಚಿಸಿದರು.
ಗೃಹ ಸಚಿವರ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ಸಂಸ್ಕೃತಿಗೆ ತೊಂದರೆ ಆಗಬಾರದು. ದೇಶಿಯ ಆಟಗಳಿಗೆ ಯಾವುದೇ ತೊಂದರೆ ಆಗದ ರೀತಿ ಗೃಹ ಸಚಿವರ ಜೊತೆ ಚರ್ಚಿಸಿ ನಿಯಮಗಳನ್ನು ಸರಳೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಶಾಸಕ ನೇಮಿರಾಜ್ ನಾಯ್ಕ್ ಮಾತನಾಡಿ, ಕೋಳಿಅಂಕಕ್ಕೆ ತೊಂದರೆ ಆಗುತ್ತಿರುವುದರ ಬಗ್ಗೆ ಪ್ರಸ್ತಾಪಿಸಿದರು.
ಆಗ ಮಧ್ಯ ಪ್ರವೇಶಿಸ ಮಾಡಿದ ಸುನೀಲ್ ಕುಮಾರ್, ಕೋಳಿ ಅಂಕ ಮೊದಲಿನಿಂದಲೂ ಇದೆ. ಕೋಳಿ ಅಂಕದ ಕೋಳಿ ರುಚಿ ಬಹಳ ಚೆನ್ನಾಗಿದೆ. ನೀವು ಬಂದರೆ ಆ ರುಚಿ ತೋರಿಸುತ್ತೇವೆ ಎಂದು ಡಿಕೆಶಿಗೆ ಸುನೀಲ್ ಹೇಳಿದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…