ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚತ್ತ ರಾಜ್ಯ ಸರ್ಕಾರ, ಓರ್ವ ಜೈಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಇನ್ನು ಮುಂದೆ ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್ ಸೆಂಟರ್‌ಗಳನ್ನು ಸ್ಥಾಪನೆ ಮಾಡಲಾಗುವುದು. 15 ದಿನಗಳಲ್ಲಿ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು | ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ
ರಾಜಾತಿಥ್ಯದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಐದು ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಹೇಳಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…