ರಾಜ್ಯ

ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್‌ ಸೆಂಟರ್ ಸ್ಥಾಪನೆ:‌ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚತ್ತ ರಾಜ್ಯ ಸರ್ಕಾರ, ಓರ್ವ ಜೈಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಇನ್ನು ಮುಂದೆ ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್‌ ಸೆಂಟರ್‌ಗಳನ್ನು ಸ್ಥಾಪನೆ ಮಾಡಲಾಗುವುದು. 15 ದಿನಗಳಲ್ಲಿ ಕಮಾಂಡ್‌ ಸೆಂಟರ್‌ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಇದನ್ನು ಓದಿ: ಮೈಸೂರು | ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ರಾಜಾತಿಥ್ಯದ ವಿಡಿಯೋ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್‌ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್‌ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಐದು ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

12 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago