ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದರು.
ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣಭೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಪ್ರಶ್ನೆ ಮಾಡಿದರು.
ಶಾಸಕ ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…