ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.27) ವರದಿ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಿಗಿಂತ ಹೆಚ್ಚು ಕಾಲ ಒಳಮೀಸಲಾತಿ ಬಗ್ಗೆ ಆಳವಾದ ಅಧ್ಯಯನ ಮಾಡಿ 104 ಪುಟಗಳಲ್ಲಿ ವರದಿ ನೀಡಲಾಗಿದೆ. ಹಾಗಾಗಿ ಈ ವರದಿಯೂ ತರಾತುರಿಯಲ್ಲಿ ನೀಡಿರು ವರದಿಯಲ್ಲ. ಸರ್ಕಾರ ನಮಗೆ ವರದಿ ನೀಡಿಯೆಂದು ಕೇಳಿರಲಿಲ್ಲ, ಆದರೆ ನಾವೇ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಹೀಗಾಗಿ ವರದಿಯನ್ನು ಪರಿಗಣಿಸಿ ಸರ್ಕಾರ ಏನು ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.
ಸರ್ಕಾರಕ್ಕೆ ಒಳಮೀಸಲಾತಿಯ ಮಧ್ಯಂತರ ವರದಿ ನೀಡಿರುವುದು ವಿಳಂಬ ಧೋರಣೆ ಮಾಡುವುದಕ್ಕೆ ಅಲ್ಲ. ಬದಲಿಗೆ ಶಾಶ್ವತ ಪರಿಹಾರ ಕೊಡಬೇಕೆಂಬುದು ನಮ್ಮ ಇಚ್ಛೆಯಾಗಿದೆ. ಹೀಗಾಗಿ ಮಧ್ಯಂತರ ವರದಿ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…