ರಾಜ್ಯ

ಸಿಎಂ ಸಿದ್ದರಾಮಯ್ಯರಿಗೆ ಒಳ ಮೀಸಲಾತಿ ಮಧ್ಯಂತರ ವರದಿ ಸಲ್ಲಿಸಿದ ಆಯೋಗ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್‌ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.27) ವರದಿ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಿಗಿಂತ ಹೆಚ್ಚು ಕಾಲ ಒಳಮೀಸಲಾತಿ ಬಗ್ಗೆ ಆಳವಾದ ಅಧ್ಯಯನ ಮಾಡಿ 104 ಪುಟಗಳಲ್ಲಿ ವರದಿ ನೀಡಲಾಗಿದೆ. ಹಾಗಾಗಿ ಈ ವರದಿಯೂ ತರಾತುರಿಯಲ್ಲಿ ನೀಡಿರು ವರದಿಯಲ್ಲ. ಸರ್ಕಾರ ನಮಗೆ ವರದಿ ನೀಡಿಯೆಂದು ಕೇಳಿರಲಿಲ್ಲ, ಆದರೆ ನಾವೇ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಹೀಗಾಗಿ ವರದಿಯನ್ನು ಪರಿಗಣಿಸಿ ಸರ್ಕಾರ ಏನು ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.

ಸರ್ಕಾರಕ್ಕೆ ಒಳಮೀಸಲಾತಿಯ ಮಧ್ಯಂತರ ವರದಿ ನೀಡಿರುವುದು ವಿಳಂಬ ಧೋರಣೆ ಮಾಡುವುದಕ್ಕೆ ಅಲ್ಲ. ಬದಲಿಗೆ ಶಾಶ್ವತ ಪರಿಹಾರ ಕೊಡಬೇಕೆಂಬುದು ನಮ್ಮ ಇಚ್ಛೆಯಾಗಿದೆ. ಹೀಗಾಗಿ ಮಧ್ಯಂತರ ವರದಿ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago