ಬೆಂಗಳೂರು : ರೀಲ್ಸ್ ಮಾಡುವ KSRTC, BMTC ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರಿಗೆ ಸಾರಿಗೆ ಸಚಿವರು ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಈ ಬೆನ್ನಲ್ಲೆ ಇದೀಗ ಸಮವಸ್ತ್ರ ಧರಿಸಿ ರೀಲ್ಸ್ ಮಾಡುವ ಪೊಲೀಸರಿಗೆ ಕಮಿಷನರ್ ಬಿ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮ ಎಚ್ಚರಿಕೆ ಸಹ ನೀಡಿದ್ದಾರೆ.
ಸಮವಸ್ತ್ರದಲ್ಲಿ ಅಶಿಸ್ತು ತೋರಿಸುವ ಸಿಬ್ಬಂದಿ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಫೋಟೋ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಪ್ಲಾಟ್ ಫಾರ್ಮ್ ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನ ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆಗೆ ನೀಡಿ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…