DCM DK Shivakumar
ಬೆಂಗಳೂರು : ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ `ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ” ಎಂದರು.
`ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ಮಾನವ ಹಕ್ಕು ವಿಭಾಗದ ಸಭೆಯಲ್ಲಿ ರಾಹುಲ್ ಗಾಂಧಿ ಅವರು, ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದು ಹೇಳಿದರು.
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…