ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅಂಗನವಾಡಿ ಕಾರ್ಯಕರ್ತೆಯರ ಮನವಿ ಸ್ವೀಕರಿಸಿ ಮಾತನಾಡಿದರು.
ಮಹಿಳೆಯರ ಸಬಲೀಕರಣಕ್ಕಾಗಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.





