ಬೆಂಗಳೂರು: ಸಂವಿಧಾನ ಬದ್ದವಾದ ಒಕ್ಕೂಟ ತತ್ವಗಳು ಹಾಗೂ ದಕ್ಷಿಣ ರಾಜ್ಯಗಳ ಅಧಿಕಾರ ರಕ್ಷಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಎಂಬ ತತ್ವ ವಿರೋಧಿಸಿ ಎಂಕೆ ಸ್ಟಾಲಿನ್ ಮಾ.22ರಂದು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಏರ್ಪಾಡು ಮಾಡಿದ್ದಾರೆ.
ಇದಕ್ಕೆ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದು, ರಾಜ್ಯಗಳ ಸ್ವಾಯತ್ತತೆ ಹಾಗೂ ಕ್ಷೇತ್ರ ಮರುವಿಂಗಡನೆ ಬಗ್ಗೆ ಮಹತ್ವದ ವಿಷಯಗಳನ್ನು ಎತ್ತಿದ ನಿಮ್ಮ ಪತ್ರ ನನಗೆ ತಲುಪಿದೆ. ಪೂರ್ವ ನಿಗದಿ ಕಾರ್ಯಕ್ರಮಗಳು ಇರುವ ಕಾರಣ ಮಾರ್ಚ್ 22ರ ಸಭೆಗೆ ಹಾಜರಾಗಲು ಸಾದ್ಯವಾಗುತ್ತಿಲ್ಲ.
ಆ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ʼಎಕ್ಸ್ʼ ನಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರ ನಡೆಸಲು ಹೊರಟಿರುವ, ಜನಸಂಖ್ಯಾ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಸಂಬಂಧ ತಮಿಳುನಾಡು ಜೊತೆಗೆ ಕೈ ಜೋಡಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕರ್ನಾಟಕ, ಕೇರಳ, ತೆಲಂಗಾಣ, ಪಶ್ಚಿಮ ಬಂಗಾಳ, ಪಂಜಾಬ್, ಒಡಿಶಾ ಹಾಗೂ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.
ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯು ಅನ್ಯಾಯದ ಕಸರತ್ತು. ಇದರ ವಿರುದ್ಧ ನಿರಂತರ ಹೋರಾಟದ ಅಗತ್ಯವಿದೆ. ಇದಕ್ಕಾಗಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಭಾಗವಾಗಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…