ರಾಜ್ಯ

ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಐಕ್ಯತೆ ಹಾಗೂ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ತೀರ್ಮಾನ ಮಾಡಿದೆ. ಪಕ್ಷದ ಕಾರ್ಯಕಾರಿ ಸಮಿತಿ ನಿರ್ಣಯ ಕೈಗೊಂಡಿದ್ದು, ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು. ದೇಶದ ಐಕ್ಯತೆ, ಶಾಂತಿ, ಸಮಗ್ರತೆ ಮುಖ್ಯ. ಪ್ರತಿಯೊಬ್ಬರ ಪ್ರಾಣವೂ ಮುಖ್ಯ. ನಾವೆಲ್ಲರೂ ಭಾರತೀಯರು ಎಂದರು.

ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಬೇಕಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಅವರೇ ಉತ್ತರ ಕೊಡಬೇಕು. ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‍ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ನೀಡಿರುವ ಹೇಳಿಕೆಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

20 mins ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

23 mins ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

26 mins ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

29 mins ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

37 mins ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

51 mins ago