eshwar khandre
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪ್ರಶ್ನೋತ್ತರ ಕಲಾಪದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರಿಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ವರದಿ ಮಂಡಿಸಿ, ಎಲ್ಲಾ ಶಾಸಕರಿಗೂ ಮಾಹಿತಿ ನೀಡುವಂತೆ ಇಲಾಖೆಯಿಂದ ಆದೇಶ ನೀಡಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಇದನ್ನೂ ಓದಿ:-ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ
ಕೋಲಾರ ಜಿಲ್ಲೆಯಲ್ಲಿ 36992 ಹೆಕ್ಟೇರ್ ಮೀಸಲು, 545.65 ಹೆಕ್ಟೇರ್ ಗ್ರಾಮ, 2885.59 ಹೆಕ್ಟೇರ್ ರಕ್ಷಿತ, ಸೆಕ್ಷೆನ್ 04 ಅಡಿ 1047.55 ಹೆಕ್ಟೇರ್, 5529.89 ಹೆಕ್ಟೇರ್ ವರ್ಗೀಕರಿಸಿದ ಹಾಗೂ 4986.70 ಹೆಕ್ಟೇರ್ ಪರಿಭಾವಿತ ಅರಣ್ಯವಿದೆ. ಒಟ್ಟಾರೆ ಜಿಲ್ಲೆಯಲ್ಲಿ 51987 ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಮೋಜಿಣಿ ಕಾರ್ಯಕೈಗೊಂಡು ಅಕ್ರಮ ಅರಣ್ಯ ಒತ್ತುವರಿ ಪ್ರದೇಶವನ್ನು ಗುರುತಿಸಿದ್ದಾರೆ. ಕರ್ನಾಟಕ ಅರಣ್ಯ ಕಾಯಿದೆ 1964ರ ಕಲಂ 64(ಎ) ಅನ್ವಯ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಒಮ್ಮೆ ಪಹಣಿಯಲ್ಲಿ ಅರಣ್ಯ ಎಂದು ನಮೂದಾರೆ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಅನುಮತಿ ಪಡೆಯದೆ ಸಂಬಂದಿಸಿದ ಜಮೀನನ್ನು ಯಾರಿಗೂ ಮಂಜೂರು ಮಾಡಲು ಬರುವುದಿಲ್ಲ. ಸರ್ವೋಚ್ಛ ನ್ಯಾಯಾಲಯವು ಸಹ ಒಮ್ಮೆ ಅರಣ್ಯ ಎಂದರೆ ಸದಾ ಅರಣ್ಯ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಖಾಸಗಿ ಹಾಗೂ ಪಟ್ಟಾ ಜಮೀನು ಹೊಂದಿರವ ಯಾರನ್ನು ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಬಂಗಾರಪೇಟೆ ತಾಲ್ಲೂಕಿನ ಇಂದಿರಾಗಾಂಧಿ ಪಾರ್ಕ್ ಅಭಿವೃದ್ಧಿ ಪಡಿಸಲು 2016-17 ರಿಂದ 2025-26 ರವರೆಗೆ ರೂ.2.37 ಕೋಟಿ ಅನುದಾನ ನೀಡಲಾಗಿದೆ. ಅಗತ್ಯವಿದ್ದಲ್ಲಿ ಶಾಸಕರ ಬೇಡಿಕೆ ಮೇರೆಗೆ ಅನುದಾನ ಒದಗಿಸಲಾಗುವುದು. ಮಾಲೂರು ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ತಡೆಗಟ್ಟಲು 74.43 ಕಿ.ಮೀ. ಸೋಲಾರ್ ತಂತಿಬೇಲಿ ಅಳವಡಿಸಲಾಗಿದೆ. ತಂತಿಬೇಲಿ ನಿರ್ವಹಣೆ ಅಗತ್ಯ ಇರುವ ಅನುದಾನವನ್ನು ಸಹ ನೀಡುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ರಾಜ್ಯದ ಎಲ್ಲೆಡೆ ಪರಿಭಾವಿತ ಅರಣ್ಯ ವಿಸ್ತೀರ್ಣದ ಗೊಂದಲ ನಿವಾರಣೆ ಸರ್ಕಾರ ಸಮಿತಿ ರಚಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಸಮಿತಿ ರಚಿಸುವ ವರದಿಯನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ಜಂಟಿ ಸರ್ವೇಕಾರ್ಯ ಮುಗಿಯುವವರೆಗೆ ಜನರನ್ನು ಒಕ್ಕಲೆಬ್ಬಿಸಬಾರದು ಎಂದು ಶಾಸಕರುಗಳಾದ ಸಿ.ಸಿ.ಪಾಟೀಲ್, ಸುನಿಲ್ ಕುಮಾರ್, ಅರಗಜ್ಞಾನೇಂದ್ರ, ಭಾಗೀರತಿ ಮರುಳ್ಯ ಸೇರಿದಂತೆ ಶಾಸಕರು ಸಚಿವರಲ್ಲಿ ಕೋರಿದರು.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…