Mysore
17
clear sky

Social Media

ಬುಧವಾರ, 21 ಜನವರಿ 2026
Light
Dark

ರಾಜಕೀಯ ಪಕ್ಷಗಳ ಸಂವಹನಕ್ಕೆ ಆಹ್ವಾನ ನೀಡಿದ ಚುನಾವಣಾ ಆಯೋಗ

ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ

ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ನಾಯಕರೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲು ಎಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ಚುನಾವಣೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ಚುನಾವಣಾ ನೊಂದಣಾಧಿಕಾರಿಗಳು (ERO), ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು (DEO) ಅಥವಾ ರಾಜ್ಯ ಮಟ್ಟದಲ್ಲಿ ಮುಖ್ಯ ಚುನಾವಣಾಧಿಕಾರಿಗಳು (CEO) ಬಗೆಹರಿಸಲಾಗದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಲಹೆಗಳನ್ನು ಕ್ರೂಢೀಕರಿಸಿ 2025 ರ ಏಪ್ರಿಲ್ 30 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

ಈ ಕುರಿತು ಆಯೋಗದಿಂದ ಇಂದು ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿರುವ ವೈಯಕ್ತಿಕ ಪತ್ರದಲ್ಲಿ, ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ಸದಸ್ಯರೊಂದಿಗೆ ಪರಸ್ಪರ ಅನುಕೂಲಕರ ಸಮಯದಲ್ಲಿ, ಸ್ಥಾಪಿತ ಕಾನೂನಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಸಂವಾದವನ್ನು ರೂಪಿಸಲು ವೇದಿಕೆಯನ್ನು ಸೃಜಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವಾರ ನಡೆದ ಭಾರತ ಚುನಾವಣಾ ಆಯೋಗದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನದಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ನೋಂದಣಾದಿಕಾರಿಗಳು, ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸಲು ಸೂಚನೆ ನೀಡಿದ್ದರು. ಇಂತಹ ಸಭೆಗಳಲ್ಲಿ ಪಡೆದ ಯಾವುದೇ ಸಲಹೆಗಳನ್ನು ಈಗಾಗಲೇ ಕಾನೂನು ಚೌಕಟ್ಟಿನೊಳಗೆ ಕಟ್ಟುನಿಟ್ಟಾಗಿ ಪರಿಹರಿಸಿ, 2025ನೇ ಮಾರ್ಚ್ 31, ರೊಳಗೆ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಿಳಿಸಲಾಗಿತ್ತು. ಅಲ್ಲದೆ, ಚುನಾವಣಾ ಆಯೋಗದ ಈ ವಿನೂತನ ಕಾರ್ಯಕ್ಕೆ ರಾಜಕೀಯ ಪಕ್ಷಗಳೂ ಸಹ ಕೈಜೋಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಲು ಒತ್ತಾಯಿಸಲಾಗಿತ್ತು.

ಭಾರತ ಚುನಾವಣಾ ಆಯೋಗವು, ಸಂವಿಧಾನ ಮತ್ತು ಶಾಸನಬದ್ಧ ಚೌಕಟ್ಟಿನ ಪ್ರಕಾರ, ಚುನಾವಣಾ ಪ್ರಕ್ರಿಯೆಗಳ ಎಲ್ಲಾ ಅಂಶಗಳನ್ನು ಒಳಗೊಂಡು ಗುರುತಿಸಿರುವ 28 ಪಾಲುದಾರರಲ್ಲಿ ರಾಜಕೀಯ ಪಕ್ಷಗಳು ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ. ರಾಜಕೀಯ ಪಕ್ಷಗಳಿಗೆ ಬರೆದ ಪತ್ರದಲ್ಲಿ ಆಯೋಗವು ಜನರ ಪ್ರಾತಿನಿಧ್ಯ ಕಾಯ್ದೆ 1950 ಮತ್ತು 1951; ಮತದಾರರ ನಿಯಮಗಳ ನೋಂದಣಿ, 1960; ಚುನಾವಣಾ ನಿಯಮಗಳ ನಡವಳಿಕೆ, 1961; ಮಾನ್ಯ ಸುಪ್ರೀಂ ಕೋರ್ಟ್ ಮತ್ತು ಭಾರತದ ಚುನಾವಣಾ ಆಯೋಗವು ನೀಡಿದ ಸೂಚನೆಗಳು, ಕೈಪಿಡಿಗಳು ಮತ್ತು ಕೈಪಿಡಿಗಳ ಆದೇಶಗಳು ಭಾರತ ಚುನಾವಣಾ ಆಯೋಗದ ವೆಬ್ ಸೈಟ್‍ನಲ್ಲಿ ಕಾಲಕಾಲಕ್ಕೆ ಲಭ್ಯವಿದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ವಿಕೇಂದ್ರೀಕೃತ, ಮತ್ತು ಪಾರದರ್ಶಕ ಕಾನೂನು ಚೌಕಟ್ಟನ್ನು ಆಯೋಗವು ಸ್ಥಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Tags:
error: Content is protected !!