ರಾಜ್ಯ

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲ್ಯಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ‌. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.

ಈ ಹಿಂದೆ ಮಹಿಳೆಯರು ಅಡುಗೆ ಮನೆಗೆ ಸೀಮಿತರಾಗಿದ್ದರು. ಅಂತಹ ಸಂದರ್ಭದಲ್ಲಿ ಈ ಕಾಲೇಜು ಆರಂಭವಾಗಿದೆ. ಆ ಸಂದರ್ಭದಲ್ಲೂ ಸಾಕಷ್ಟು ಮಹಿಳೆಯರು ಈ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕಲಿಯುವ ಉತ್ಸಾಹ ಇದ್ದರೆ, ಎಲ್ಲವೂ ಸಾಧ್ಯ ಎನ್ನುವುದನ್ನು ತೋರಿಸಿದ್ದಾರೆ. ಕೆಲವರಿಗೆ ಅವಕಾಶ ಕಡಿಮೆ ಸಿಗಬಹುದು, ಕೆಲವರಿಗೆ ಜಾಸ್ತಿ ಸಿಗಬಹುದು. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮನೋಭಾವ ಬೇಕು ಎಂದು ಸಚಿವರು ಹೇಳಿದರು.

ಈಗ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜ ತುಂಬಾ ಬದಲಾಗಿದೆ. ಗಂಡಸರ ಯೋಚನಾ ರೀತಿ ಸಹ ಬದಲಾಗಿದೆ. ಗಂಡು ಹೆಣ್ಣು ಎಂಬ ಬೇಧ ಭಾವ ಉಳಿದಿಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ನಮ್ಮ ದೇಶದ ಸಕಾರಾತ್ಮಕ ಬೆಳವಣಿಗೆಗೆ ಇದು ಕೂಡ ಕಾರಣವಾಗಿದೆ ಎಂದು ಹೇಳಿದರು.

ಧಾರವಾಡವನ್ನು ವಿದ್ಯಾಕಾಶಿ ಎಂದು ಕರೆಯುತ್ತೇವೆ. ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ನಮ್ಮ ಹೆಮ್ಮೆ ಎಂದು ಬಣ್ಣಿಸಿದರು.

ಆಂದೋಲನ ಡೆಸ್ಕ್

Recent Posts

ಜ.9ರಿಂದ ಮೈಸೂರಲ್ಲಿ ʻದೇಸಿ ಎಣ್ಣೆ ಮೇಳʼ

ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ…

40 mins ago

ಟ್ರಂಪ್‌ ನಡೆಗೆ ಖಂಡನೆ ; ವೆನೆಜುವೆಲಾ ಅಧ್ಯಕ್ಷರ ಬಿಡುಗಡೆಗೆ ಆಗ್ರಹ

ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ)…

49 mins ago

ಮೈಸೂರು | ವಸ್ತುಪ್ರದರ್ಶನದಲ್ಲಿ ಡ್ರಾಗನ್‌ ಬೋಟಿಂಗ್‌

ಮೈಸೂರು : ಮೈಸೂರು ನಗರಿಯೂ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆ ಹೀಗೆ ಇಲ್ಲಿನ…

56 mins ago

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

2 hours ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

3 hours ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

3 hours ago