ನವದೆಹಲಿ : ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಂಪನಿಗಳು ವ್ಯಕ್ತಿಗಳನ್ನು ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ ಎಂದಿದ್ದಾರೆ. ಅಷ್ಟೆ ಅಲ್ಲದೆ ಕಂಪನಿಗಳು ‘ಬೆವರಿನ ಅಂಗಡಿ ನಡೆಸಲು ಸಾಧ್ಯವಿಲ್ಲ’ ಖಡಕ್ಕಾಗಿ ನುಡಿದಿದ್ದಾರೆ.
ಐಟಿ ಉದ್ಯಮಕ್ಕೆ ಎನ್‌ಆರ್ ನಾರಾಯಣ ಮೂರ್ತಿ ಅವರು ನೀಡಿರುವ ಕೊಡುಗೆ ಮತ್ತು ಅವರ ಬುದ್ಧಿವಂತಿಕೆಯನ್ನು ಶ್ಲಾಘಿಸಿದ ಪ್ರಿಯಾಂಕ್ ಖರ್ಗೆ, ಒಬ್ಬ ವ್ಯಕ್ತಿ ಎಷ್ಟು ಗಂಟೆಗಳ ಕಾಲ ದುಡಿಯಬೇಕು ಎಂದು ಸಮಯವನ್ನು ನಿಗದಿಪಡಿಸುವ ಬದಲು, ಕಂಪನಿಗಳು ತಮ್ಮ ವೃತ್ತಿಪರ ಕಾರ್ಯಯೋಜನೆಯಲ್ಲಿ ಎಷ್ಟು ಉತ್ಪಾದಕವಾಗಿವೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಹಾಗೂ ಐಟಿ ಮತ್ತು ಟೆಕ್ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ನಾರಾಯಣ ಮೂರ್ತಿಯವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, “ಇದು ಪ್ರತಿಯೊಬ್ಬರಿಗೂ ವಿಭಿನ್ನವಾದುದು. ಸಚಿವನಾಗಿ ನಾನು ಉತ್ಪಾದಕತೆಯ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ನೀವು ಏಳು ಗಂಟೆಗಳಲ್ಲಿ ಉತ್ಪಾದಕರಾಗಿದ್ದರೆ ನನಗೆ ಯಾವುದೇ ಅಭ್ಯಂತರವಿಲ್ಲ. ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ನಿಮ್ಮ ಇತರ ಏಳು ಗಂಟೆಗಳನ್ನು ಉಪಯೋಗಿಸಲು ನೀವು ಬಯಸಿದರೆ, ಅದು ಇಲಾಖೆ ಅಥವಾ ಸಚಿವಾಲಯಕ್ಕೆ ಸಹಾಯವಾಗುತ್ತದೆ ಎಂದಾದರೆ ನಾನು ನಿಮ್ಮ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ, ಇದನ್ನು (70 ಗಂಟೆಗಳ ಕೆಲಸ) ಮಾಡಲು ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ನೀವು ಬೆವರಿನ ಅಂಗಡಿಗಳನ್ನು ನಡೆಸಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.
ರಾಜ್ಯದಲ್ಲಿನ ಹೂಡಿಕೆಯ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳು ಮತ್ತು ಸೆಮಿಕಂಡಕ್ಟರ್ ಕ್ಷೇತ್ರಗಳ ಕಂಪನಿಗಳನ್ನು ರಾಜ್ಯಕ್ಕೆ ಕರೆತರಲು ಕರ್ನಾಟಕವು ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನೀವು ಅಮೆರಿಕದ ದೈತ್ಯ ಕಂಪನಿ ಟೆಸ್ಲಾವನ್ನು ಸಂಪರ್ಕಿಸಿದ್ದೀರಾ ಎಂದು ಕೇಳಿದಾಗ, ಅಮೆರಿಕಾದ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆಯು ಸದ್ಯದಲ್ಲೇ ಭಾರತಕ್ಕೆ ಕಾಲಿಡಲಿದೆ. ಕೆಲವು ಸಂಭಾಷಣೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. “ಈ ಹಂತದಲ್ಲಿ ನಾವು ಕೆಲವು ಪರೋಕ್ಷ ಸಂಭಾಷಣೆಗಳನ್ನು ನಡೆಸಿದ್ದೇವೆ,” ಎಂದಿದ್ದಾರೆ.
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…