ರಾಜ್ಯ

ಕಂಪನಿಗಳು ನೌಕರರಿಗೆ ಹೆಚ್ಚುವರಿ ಗಂಟೆ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ: ಪ್ರಿಯಾಂಕ್‌ ಖರ್ಗೆ

ನವದೆಹಲಿ : ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಂಪನಿಗಳು ವ್ಯಕ್ತಿಗಳನ್ನು ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ ಎಂದಿದ್ದಾರೆ. ಅಷ್ಟೆ ಅಲ್ಲದೆ ಕಂಪನಿಗಳು ‘ಬೆವರಿನ ಅಂಗಡಿ ನಡೆಸಲು ಸಾಧ್ಯವಿಲ್ಲ’ ಖಡಕ್ಕಾಗಿ ನುಡಿದಿದ್ದಾರೆ.

ಐಟಿ ಉದ್ಯಮಕ್ಕೆ ಎನ್‌ಆರ್‌ ನಾರಾಯಣ ಮೂರ್ತಿ ಅವರು ನೀಡಿರುವ ಕೊಡುಗೆ ಮತ್ತು ಅವರ ಬುದ್ಧಿವಂತಿಕೆಯನ್ನು ಶ್ಲಾಘಿಸಿದ ಪ್ರಿಯಾಂಕ್‌ ಖರ್ಗೆ, ಒಬ್ಬ ವ್ಯಕ್ತಿ ಎಷ್ಟು ಗಂಟೆಗಳ ಕಾಲ ದುಡಿಯಬೇಕು ಎಂದು ಸಮಯವನ್ನು ನಿಗದಿಪಡಿಸುವ ಬದಲು, ಕಂಪನಿಗಳು ತಮ್ಮ ವೃತ್ತಿಪರ ಕಾರ್ಯಯೋಜನೆಯಲ್ಲಿ ಎಷ್ಟು ಉತ್ಪಾದಕವಾಗಿವೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಹಾಗೂ ಐಟಿ ಮತ್ತು ಟೆಕ್ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ನಾರಾಯಣ ಮೂರ್ತಿಯವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, “ಇದು ಪ್ರತಿಯೊಬ್ಬರಿಗೂ ವಿಭಿನ್ನವಾದುದು. ಸಚಿವನಾಗಿ ನಾನು ಉತ್ಪಾದಕತೆಯ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ನೀವು ಏಳು ಗಂಟೆಗಳಲ್ಲಿ ಉತ್ಪಾದಕರಾಗಿದ್ದರೆ ನನಗೆ ಯಾವುದೇ ಅಭ್ಯಂತರವಿಲ್ಲ. ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ನಿಮ್ಮ ಇತರ ಏಳು ಗಂಟೆಗಳನ್ನು ಉಪಯೋಗಿಸಲು ನೀವು ಬಯಸಿದರೆ, ಅದು ಇಲಾಖೆ ಅಥವಾ ಸಚಿವಾಲಯಕ್ಕೆ ಸಹಾಯವಾಗುತ್ತದೆ ಎಂದಾದರೆ ನಾನು ನಿಮ್ಮ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ, ಇದನ್ನು (70 ಗಂಟೆಗಳ ಕೆಲಸ) ಮಾಡಲು ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ನೀವು ಬೆವರಿನ ಅಂಗಡಿಗಳನ್ನು ನಡೆಸಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಹೂಡಿಕೆಯ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳು ಮತ್ತು ಸೆಮಿಕಂಡಕ್ಟರ್‌ ಕ್ಷೇತ್ರಗಳ ಕಂಪನಿಗಳನ್ನು ರಾಜ್ಯಕ್ಕೆ ಕರೆತರಲು ಕರ್ನಾಟಕವು ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನೀವು ಅಮೆರಿಕದ ದೈತ್ಯ ಕಂಪನಿ ಟೆಸ್ಲಾವನ್ನು ಸಂಪರ್ಕಿಸಿದ್ದೀರಾ ಎಂದು ಕೇಳಿದಾಗ, ಅಮೆರಿಕಾದ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆಯು ಸದ್ಯದಲ್ಲೇ ಭಾರತಕ್ಕೆ ಕಾಲಿಡಲಿದೆ. ಕೆಲವು ಸಂಭಾಷಣೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. “ಈ ಹಂತದಲ್ಲಿ ನಾವು ಕೆಲವು ಪರೋಕ್ಷ ಸಂಭಾಷಣೆಗಳನ್ನು ನಡೆಸಿದ್ದೇವೆ,” ಎಂದಿದ್ದಾರೆ.

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago