Categories: ರಾಜ್ಯ

ಉಪ ಚುನಾವಣೆ ಫಲಿತಾಂಶ 2028ಕ್ಕೆ ದಿಕ್ಸೂಚಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ 2028ಕ್ಕೆ ದಿಕ್ಸೂಚಿಯಾಗಿದ್ದು, ಅಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು(ನ.23) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿನ ಉಪಚುನಾವಣಾ ಫಲಿತಾಂಶದ ಮೂಲಕ 2028ರ ವಿಧಾನಸಭಾ ಚುನಾವಣೆಗೆ ಜನರು ಜನರು ಮುನ್ನುಡಿ ಬರೆದಿದ್ದಾರೆ. ಸುಳ್ಳೇ ಕಾಂಗ್ರೆಸ್ ಮನೆ ದೇವರು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕಿಸಿದ್ದರು. ಅದಕ್ಕೆ ಈ ಉಪ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಿದ್ದಾರೆ.

ನಾನು ಈ ಮೊದಲೇ ಹೇಳಿದಂತೆ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ. ಕಾಂಗ್ರೆಸ್‌ ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದಲಾಗಿ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ. ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ಅಪಪ್ರಚಾರ ಮಾಡಿದರು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು. ಆದರೆ ಚುನಾವಣೆ ಫಲಿತಾಂಶ ಬಂದ ಕೂಡಲೇ ಹಣದ ಹೊಳೆ ಹರಿಸಿದ್ದಾರೆಂದು ಹೇಳುತ್ತಾರೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ನೋಡಿ ಮೂರು ಕ್ಷೇತ್ರಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಿ ಗೆಲ್ಲಿಸಿದ್ದಾರೆ. ಚುನಾವಣೆಗಳಲ್ಲಿ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆ ಸಂಜೆಯೇ ಹೇಳಿದ್ದೆ. ಬಿಜೆಪಿ ಜೆಡಿಎಸ್ ಮೈತ್ರಿಯಾದರೂ ನಮಗೆ ಗೆಲುವು ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

1 hour ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

1 hour ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

2 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

17 hours ago