Mysore
36
few clouds

Social Media

ಬುಧವಾರ, 29 ಏಪ್ರಿಲ 2026
Light
Dark

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಈ ಬಗ್ಗೆ ಪರಿಶೀಲನೆ ಮಾಡಿಯೇ ತೀರ್ಮಾನ ಮಾಡಿದ್ದಾರೆ. ನಿನ್ನೆ ಸಿಎಂ ಹಾಗೂ ಡಿಸಿಎಂ ಸಭೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರಿಹಾರ ಮನೆ ನೀಡುವ ಬಗ್ಗೆ ನಿನ್ನೆಯ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿಸಿದರು.

ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ನಿರಾಶ್ರಿತ ನಿವಾಸಿಗಳಿಗೆ ಪರಿಹಾರ ಮನೆ ನೀಡಲು ದಾಖಲೆ ಸಂಗ್ರಹ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

Tags:
error: Content is protected !!