ರಾಜ್ಯ

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಒಂದ್ಕಡೆ ಮುಸ್ಲಿಂ ಸಮುದಾಯದಲ್ಲಿ ಸಚಿವ ಜಮೀರ್‌ ಅಹ್ಮದ್‌ ಪರ ಸಿದ್ದರಾಮಯ್ಯ ಅವರು ಒಲವು ತೋರಿದ್ದಾರೆ. ಇತ್ತ ಡಿಕೆಶಿ ಬಣದಿಂದ ಮೊಹಮ್ಮದ್‌ ಹ್ಯಾರಿಸ್‌ ಹಾಗೂ ಯು.ಟಿ ಖಾದರ್‌ ಹೆಸರು ಮುನ್ನೆಲೆಗೆ ಬಂದಿದೆ.

ಇನ್ನೂ ದಲಿತ ಸಮುದಾಯದಲ್ಲಿ ಪ್ರಿಯಾಂಕ್‌ ಖರ್ಗೆ ಹಾಗೂ ಜಿ. ಪರಮೇಶ್ವರ್‌ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆದರೆ ಇಬ್ಬರು ಬಲ‌ಗೈ ಸಮುದಾಯದವರು ಈ ಹಿಂದೆಯೂ ಡಿಸಿಎಂ ಹುದ್ದೆ ಆ ವರ್ಗಕ್ಕೆ ಸಿಕ್ಕಿದೆ. ಈ ಬಾರಿ ಎಡಗೈ ಸಮುದಾಯಕ್ಕೆ ಕೊಡಿ‌ ಎಂದು ಮುನಿಯಪ್ಪ ಪಟ್ಟು ಹಿಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ರೇಸ್‌ನಿಂದ ಲಿಂಗಾಯತ ಸಮುದಾಯ ಔಟ್ ಆದ್ರೆ, ಡಿಸಿಎಂ ಹುದ್ದೆ ಫಿಕ್ಸ್‌ ಆಗಬಹುದು ಎಂದು ಹೇಳಲಾಗಿದೆ. ಆದ್ರೆ ಡಿಸಿಎಂ ಹುದ್ದೆಗೂ ಎಂ.ಬಿ ಪಾಟೀಲ್‌ ಹಾಗೂ ಈಶ್ವರ್‌ ಖಂಡ್ರೆ ನಡುವೆ ಫೈಟ್‌ ಜೋರಾಗಿದೆ.

ಈ ಬೆಳವಣಿಗೆ ನಡುವೆ ಸಚಿವ ಸ್ಥಾನಕ್ಕೆ ಲಾಭಿ ಜೋರಾಗಿದ್ದು, ಸಂತೋಷ್‌ ಲಾಡ್, ಪ್ರಿಯಾಂಕ್‌ ಖರ್ಗೆ, ಮಧು ಬಂಗಾರಪ್ಪ ಅವರು ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಶಾಸಕರಾದ ಬಂಗಾರಪೇಟೆ ನಾರಾಯಣ ಸ್ವಾಮಿ, ಗಣೇಶ್ ಹುಕ್ಕೇರಿ ಡಿಕೆಶಿ ಭೇಟಿಗೆ ಆಗಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

17 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

18 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

18 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

18 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

19 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

22 hours ago