ರಾಜ್ಯ

ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರ – ʼಯು ಟರ್ನ್ ಹೊಡೆಯುವ ಗಿರಾಕಿ ಅಲ್ಲʼ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಡಿಜಿಟಲ್ ಯೋಧ ರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಹೇಳಿದ್ದೆ. ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದೇನೆ. ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಸ್ಪಷ್ಟಪಡಿಸಿದರು.

2019ರಲ್ಲಿ ನಾನು ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ, ಕಾರ್ಯಕರ್ತರ ಪ್ರೀತಿ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಕಳೆದ ನಾಲ್ಕು ದಿನಗಳಿಂದಲೂ ನಾನು ಈ ಬಗ್ಗೆ ಬರುತ್ತಿರುವ ಸುದ್ದಿ, ವದಂತಿಗಳನ್ನು ಗಮನಿಸುತ್ತಿದ್ದೇನೆ. ಆದರೆ, ನಾನು ಯು ಟರ್ನ್ ಹೊಡೆಯುವ ಪೈಕಿ ಅಲ್ಲ ಎಂದು ನೇರವಾಗಿ ಹೇಳಲು ಬಯಸುತ್ತೇನೆ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ ಎಂದರು.

ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆಯುತ್ತಿದ್ದಾರೆ. ಅವರ ಪ್ರೀತಿ, ವಿಶ್ವಾಸ ಹಾಗೂ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಪಕ್ಷ ಸಂಘಟನೆಗಾಗಿ ಓಡಾಡಿದ್ದೆ ಎಂದರು.

ಜೆಡಿಎಸ್ – ಬಿಜೆಪಿ ಮೈತ್ರಿಯನ್ನು ಬಲಪಡಿಸಬೇಕು, ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಹೀಗಾಗಿ ನನ್ನ ಗಮನ ರಾಜ್ಯದ 28 ಲೋಸಭೆ ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಮಂಡ್ಯ, ಹಾಸನದಲ್ಲಿ ಜೆಡಿಎಸ್ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಅವರ ವಿರೋಧವಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರು, ಕೇಂದ್ರದ ನಾಯಕರು, ನಮ್ಮ ಪಕ್ಷದ ವರಿಷ್ಠರು ಅತೀ ಶೀಘ್ರದಲ್ಲೇ ಇಂತಹ ಎಲ್ಲ ಪ್ರಶ್ನೆಗಳಿಗೂ ತೆರೆ ಎಳೆಯುತ್ತಾರೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕು, ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದರು.

ಪ್ರೀತಂಗೌಡರ ಹೇಳಿಕೆ ಸಂತೋಷಕರ. ಆದರೆ ಇದನ್ನು ಕೇಂದ್ರದ ನಾಯಕರು, ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಎಲ್ಲಕ್ಕೂ ಕಾಲ ಉತ್ತರಿಸುತ್ತದೆ ಎಂದ ಅವರು, ಏನೇ ಪ್ರಶ್ನೆ ಕೇಳಿದರೂ ಕಾಲವೇ ಉತ್ತರಿಸುತ್ತದೆ ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.

ಮಂಡ್ಯ ಜೆಡಿಎಸ್ ನಲ್ಲಿ ಗಂಡಸರು ಯಾರೂ ಇಲ್ವಾ? ಎಂಬ ಮದ್ದೂರು ಶಾಸಕ ಕದಲೂರು ಉದಯ್ ಹೇಳಿಕೆ ಬಗ್ಗೆ ಬಗ್ಗೆ ಕೇಳಲಾದ ಪ್ರಶ್ನೆಗೂ; ಇರಲಿ, ಅದಕ್ಕೂ ಕಾಲವೇ ಉತ್ತರಿಸುತ್ತದೆ ಎಂದರು ನಿಖಿಲ್ ಕುಮಾರಸ್ವಾಮಿ ಮಾರ್ಮಿಕವಾಗಿ ಉತ್ತರಿಸಿದರು.

ತೆರಿಗೆ ಹಂಚಿಕೆ ಬಗ್ಗೆ ಕಾಂಗ್ರೆಸ್ ಪಕ್ಷವು ಉತ್ತರ ಕೊಡಿ ಎಂದು ಅಮಿತ್ ಶಾ ಅವರನ್ನು ಒತ್ತಾಯ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಣಕಾಸು ಆಯೋಗಗಳು ಸ್ವಾಯತ್ತ ಸಂಸ್ಥೆಗಳು.

ಸ್ವತಂತ್ರ್ಯವಾಗಿ ಕೆಲಸ ಮಾಡುತ್ತೇವೆ. ರಾಜ್ಯಗಳಿಗೆ ತೆರಿಗೆ, ಅನುದಾನ ಹಂಚಿಕೆ ಬಗ್ಗೆ ಹಣಕಾಸು ಆಯೋಗದ ಶಿಫಾರಸು ಅನ್ವಯ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.

ಆದರೆ ಇದನ್ನೇ ರಾಜಕೀಯವಾಗಿ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಬಳಸಿಕೊಳ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಜನರು ಈಗ ಬಹಳ ಪ್ರಜ್ಞಾವಂತರು, ಬುದ್ಧಿವಂತರಾಗಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವುದಕ್ಕೆ ವಿರೋಧ ಸರಿಯಲ್ಲ. ಕೇಂದ್ರದ ಸಚಿವರು ಮೈಸೂರಿಗೆ ಬಂದಿದ್ದಾರೆ. ಅವರಿಗೆ ಹೃತ್ಪೂರ್ವಕ ಸ್ವಾಗತ. ಕುಮಾರಸ್ವಾಮಿ ಅವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದೆ, ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ aಅವರು ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ. ಈ ವಿಚಾರವನ್ನು ಅಮಿತ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ ಎಂದು ನಿಖಿಲ್ ಅವರು ಮಾಹಿತಿ ನೀಡಿದರು.

ಜೆಡಿಎಸ್ ಡಿಜಿಟಲ್ ಯೋಧರ ಸಭೆ: ಈ ಯುವಜನರನ್ನು ಜೆಡಿಎಸ್ ಡಿಜಿಟಲ್ ಯೋಧರು ಎಂದು ಕರೆದ ನಿಖಿಲ್ ಅವರು, ನಾನು ಕೂಡ ಯುವಕ. ನಮ್ಮ ಪಕ್ಷದಲ್ಲಿ ಇಷ್ಟೋಂದು ಯುವಜನರು ಜಾಲತಾಣಗಳಲ್ಲಿ ನನಗೆ ಬಹಳ ಸಂತೋಷ ಉಂಟು ಮಾಡಿದೆ. ಪಕ್ಷಕ್ಕೆ ಅಧಿಕಾರ ಇರಲಿ, ಇಲ್ಲದಿರಲಿ ಪ್ರತಿ ಸಂದರ್ಭದಲ್ಲಿಯೂ ಯೋಧರಂತೆ ಪಕ್ಷಕ್ಕಾಗಿ ದುಡಿಯುತ್ತಿರುವ ನಿಮಗೆ ಆಭಾರಿ ಆಗಿದ್ದೇನೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಅವರು ಮಾತನಾಡಿ, ಜೆಡಿಎಸ್ ಡಿಜಿಟಲ್ ಯೋಧರಿಗೆ ಕೆಲ ಮಹತ್ವಪೂರ್ಣ ಟಿಪ್ಸ್ ಗಳನ್ನು ನೀಡಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಪಕ್ಷದ ವಕ್ತಾರರಾದ ಗಂಗಾಧರ ಮೂರ್ತಿ, ಹೆಚ್.ಎನ್.ದೇವರಾಜ್, ಎಸ್.ಜಿ.ವೀರಣ್ಣ ಸೇರಿದಂತೆ ಅನೇಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

13 mins ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

55 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

3 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

3 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

3 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

3 hours ago