ರಾಜ್ಯ

ಧರ್ಮಸ್ಥಳ | ಹದಿನೈದು ಕಡೆ ಶವ ಹೂತಿದ ಜಾಗ ತೋರಿದ ದೂರುದಾರ : ಹೊರತೆಗೆಯಲು ಸಿದ್ದತೆ

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ‌ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ‌ತನಿಖಾ ತಂಡಕ್ಕೆ ತೋರಿಸಿದ್ದಾರೆ.

ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿರುವ ಸ್ನಾನ ಘಟ್ಟದ ಪಕ್ಕದ ಕಾಡಿಗೆ ತಂಡವನ್ನು ಕರೆದೊಯ್ದ ದೂರುದಾರ ಹದಿನೈದು ಕಡೆ ಶವ ಹೂತಿರುವ ಜಾಗವನ್ನು ತನಿಖಾ ತಂಡಕ್ಕೆ ತೋರಿಸಿದ್ದಾರೆ. ಸ್ಥಳದ ಮಹಜರು ನಡೆಸಿದ ಪೊಲೀಸರು ಶವವನ್ನು ಹೊರ ತೆಗೆಯಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ದೂರುದಾರ ತಲೆಬುರುಡೆಯೊಂದನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಅದರಲ್ಲಿ ಅಂಟಿಕೊಂಡಿರುವ ಮಣ್ಣನ್ನು ಈ ಶವ ಹೂತಿರುವ ಗುಂಡಿಯ ಮಣ್ಣಿನದೇ ಎಂದು ಪರೀಕ್ಷಿಸಬೇಕಿದೆ. ಶವದ ಡಿಎನ್ಎ ಪರೀಕ್ಷೆ ನಡೆಸಿ ಶವ ಯಾರದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್, ದೂರುದಾರನ ಪರ ಮೂವರು ವಕೀಲರು ಹಾಜರಿದ್ದರು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

5 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

7 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

7 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

7 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

7 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

10 hours ago