ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ಈಗ ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ವೀಕೆಂಡ್‌ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಕಿಚ್ಚ ಸುದೀಪ್ ಗರಂ ಆಗಿದ್ದರು. ನನ್ನ ಪಿತ್ತ ನತ್ತಿಗೇರುತ್ತಲ್ಲ ಅದಕ್ಕಿಂತ ಮೊದಲು ಅಂತೆಲ್ಲಾ ಬೈದಿದ್ದರು. ಇದು ಮಹಿಳೆಗೆ ಮಾಡಿದ ಅವಮಾನ ಎಂದು ಸಂಧ್ಯಾ ಪವಿತ್ರ ಅವರು ಮಹಿಳಾ ಆಯೋಗ ಹಾಗೂ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇನ್ನು ಬಿಗ್‌ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಸ್ಪರ್ಧೆ ವೇಳೆ ರಿಷಾ ಬಟ್ಟೆಗಳನ್ನು ವಾಷ್ ರೂಂನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.





