Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಚಲವರಾಯ ಸ್ವಾಮಿ

ಕಾರವಾರ : ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು‌ ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು.

ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿ‌ ಹೊಂದಲಾಗಿದೆ. ಕಳೆದ 2 ವರ್ಷದಲ್ಲಿ ರೈತರಿಗೆ 344 ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 50 ಲಕ್ಷ ಹಾಗೂ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ. ಸ್ಪಿಂಕ್ಲರ್ ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆಯಬೇಕು ಎಂದರು.

ಸಮಗ್ರ ಕೃಷಿ ಮಾಡುವ ಅನೇಕ ರೈತರ ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ. ಭೂಮಿಯನ್ನು ನಂಬಿ ಸರ್ಕಾರದ ಸವಲತ್ತು ಪಡೆದುಕೊಂಡು ಎಲ್ಲಾ ರೈತರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂದರು.

ರಾಜ್ಯ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ‌ ಯೋಜನೆಯನ್ನು ಜನರಿಗೆ ನೀಡಿ ಅವರ ಬದುಕನ್ನು ಹಸನು ಮಾಡಲಾಗಿದೆ. ವರ್ಷಕ್ಕೆ 50 ಸಾವಿರ ಕೋಟಿಯಂತೆ 5 ವರ್ಷಕ್ಕೆ 250 ಸಾವಿರ ಕೋಟಿಗಳನ್ನು ಗ್ಯಾರಂಟಿ ಯೋಜನೆ ಗಳಿಗೆ ಮೀಸಲಿಡಲಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಇತರೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್. ವಿ. ದೇಶಪಾಂತ್ ಮಾತನಾಡಿ, ರೈತರು ತಮಗೆ ವಿತರಿಸಿರುವ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಆರ್ಥಿಕ ಸುಧಾರಣೆಯ ಜೊತೆಗೆ ಕೃಷಿ ಉತ್ಪನ್ನಗಳನ್ನು ಹೆಚ್ಚು ಮಾಡಿಕೊಳ್ಳಬೇಕು. ಭತ್ತ ಜೋಳದ ಬೆಳೆಗಳ ಇಳುವರಿ ಕಡಿಮೆಯಾದಂತೆ ಇಲ್ಲಿನ ರೈತರು ಕಬ್ಬು ಬೆಳೆಯಲು ಪ್ರಾರಂಭಿಸಿದರು. ಇದರಿಂದಾಗಿ‌ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆಯನ್ನು ತೆರೆಯಲಾಯಿತು. ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪಡೆದುಕೊಂಡು ರೈತರು ಸಾಮಾಜಿಕ, ಶೈಕ್ಷಣಿಕ‌ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾದರೆ ದೇಶದ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಬೆಳೆ ಸಮೀಕ್ಷೆ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಕೃಷಿ ಇಲಾಖೆ ಆಯುಕ್ತ ವೈ ಎಸ ಪಾಟೀಲ್ , ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಹಳಿಯಾಳ‌ ಪುರಸಭೆ ಅಧ್ಯಕ್ಷೆ ಪಾರ್ವತಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾವoಕರ್ ಮತ್ತಿತರು ಇದ್ದರು.

Tags:
error: Content is protected !!