ರಾಜ್ಯ

1ನೇ ತರಗತಿಯಿಂದಲೇ ಕಂಪ್ಯೂಟರ್‌ ಶಿಕ್ಷಣ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು.

ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಐತಿಹಾಸಿಕ ಗಗನಯಾನ ಮಾನವಸಹಿತ ಬಾಹ್ಯಾಕಾಶ ಯೋಜನೆಗೆ ಆಯ್ಕೆಯಾಗಿರುವ ಭಾರತೀಯ ವಾಯುಪಡೆಯ ಪೈಲಟ್, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಉಪಸ್ಥಿತಿಯಲ್ಲಿ ಸಚಿವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. 900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕಬೇಕು ಎಂದರು.

ಇದನ್ನು ಓದಿ: ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್‌ ನಿಧನ

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾಗಿರುವುದು ಪ್ರಪಂಚದ ತುದಿಯಲ್ಲಿ ನಿಂತ ಅನುಭವ ನೀಡುತ್ತಿದೆ. ಸುಮಾರು 40 ವರ್ಷಗಳ ಹಿಂದೆ ರಾಕೇಶ್ ಶರ್ಮಾ ಅವರು ಬಾಹ್ಯಾಕಾಶಕ್ಕೆ ಹೋದಾಗ ನಮಗೆ ಉಂಟಾದ ರೋಮಾಂಚನವನ್ನು ಶುಕ್ಲಾ ಅವರು ಮತ್ತೆ ನೆನಪಿಸುತ್ತಿದ್ದಾರೆ. ಅಂದು ನಮ್ಮ ದೇಶದ ಜನಸಂಖ್ಯೆ 100 ಕೋಟಿಗಿಂತ ಕಡಿಮೆಯಿತ್ತು, ಈಗ 140 ಕೋಟಿ ಜನರ ಕನಸನ್ನು ಶುಕ್ಲಾ ಅವರು ಹೊತ್ತು ಸಾಗುತ್ತಿದ್ದಾರೆ. ಲಕ್ನೋದಲ್ಲಿ ಕಷ್ಟಪಟ್ಟು ಓದಿ, ಇಂದು ಈ ಸ್ಥಾನಕ್ಕೆ ಏರಿರುವ ಅವರ ಸಾಧನೆ ಮಕ್ಕಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು, ಆಕಾಶವೇ ಮಿತಿ ಎಂಬಂತೆ ಸಾಧನೆ ಮಾಡಬೇಕು ಎಂದು ಸಚಿವರು ತಿಳಿಸಿದರು.

ಶುಭಾಂಶು ಶುಕ್ಲಾ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಬಾಹ್ಯಾಕಾಶ, ವಿಜ್ಞಾನ ಮತ್ತು ಪೈಲಟ್ ಜೀವನದ ಕುರಿತು ವಿದ್ಯಾರ್ಥಿಗಳು ಕೇಳಿದ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿ ಎನ್.ಎಸ್.ಬೋಸರಾಜು, ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕೆಎಸ್‍ಟಿಇಪಿಎಸ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಬಿ.ಆರ್.ಗುರುಪ್ರಸಾದ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

34 mins ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

46 mins ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

1 hour ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

1 hour ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

2 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago