ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು.
ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಐತಿಹಾಸಿಕ ಗಗನಯಾನ ಮಾನವಸಹಿತ ಬಾಹ್ಯಾಕಾಶ ಯೋಜನೆಗೆ ಆಯ್ಕೆಯಾಗಿರುವ ಭಾರತೀಯ ವಾಯುಪಡೆಯ ಪೈಲಟ್, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಉಪಸ್ಥಿತಿಯಲ್ಲಿ ಸಚಿವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. 900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕಬೇಕು ಎಂದರು.
ಇದನ್ನು ಓದಿ: ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾಗಿರುವುದು ಪ್ರಪಂಚದ ತುದಿಯಲ್ಲಿ ನಿಂತ ಅನುಭವ ನೀಡುತ್ತಿದೆ. ಸುಮಾರು 40 ವರ್ಷಗಳ ಹಿಂದೆ ರಾಕೇಶ್ ಶರ್ಮಾ ಅವರು ಬಾಹ್ಯಾಕಾಶಕ್ಕೆ ಹೋದಾಗ ನಮಗೆ ಉಂಟಾದ ರೋಮಾಂಚನವನ್ನು ಶುಕ್ಲಾ ಅವರು ಮತ್ತೆ ನೆನಪಿಸುತ್ತಿದ್ದಾರೆ. ಅಂದು ನಮ್ಮ ದೇಶದ ಜನಸಂಖ್ಯೆ 100 ಕೋಟಿಗಿಂತ ಕಡಿಮೆಯಿತ್ತು, ಈಗ 140 ಕೋಟಿ ಜನರ ಕನಸನ್ನು ಶುಕ್ಲಾ ಅವರು ಹೊತ್ತು ಸಾಗುತ್ತಿದ್ದಾರೆ. ಲಕ್ನೋದಲ್ಲಿ ಕಷ್ಟಪಟ್ಟು ಓದಿ, ಇಂದು ಈ ಸ್ಥಾನಕ್ಕೆ ಏರಿರುವ ಅವರ ಸಾಧನೆ ಮಕ್ಕಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು, ಆಕಾಶವೇ ಮಿತಿ ಎಂಬಂತೆ ಸಾಧನೆ ಮಾಡಬೇಕು ಎಂದು ಸಚಿವರು ತಿಳಿಸಿದರು.
ಶುಭಾಂಶು ಶುಕ್ಲಾ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಬಾಹ್ಯಾಕಾಶ, ವಿಜ್ಞಾನ ಮತ್ತು ಪೈಲಟ್ ಜೀವನದ ಕುರಿತು ವಿದ್ಯಾರ್ಥಿಗಳು ಕೇಳಿದ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿ ಎನ್.ಎಸ್.ಬೋಸರಾಜು, ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕೆಎಸ್‍ಟಿಇಪಿಎಸ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಬಿ.ಆರ್.ಗುರುಪ್ರಸಾದ್ ಉಪಸ್ಥಿತರಿದ್ದರು.
ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…