ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ 6 ವಾರಗಳ ಜಾಮೀನಿಗೆ ಸಪ್ತ ಷರತ್ತುಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಸಪ್ತ ಷರತ್ತುಗಳನ್ನು ವಿಧಿಸಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.‌

ಈ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 57ನೇ ಸಿಸಿಎಚ್‌ ನ್ಯಾಯಾಲಯ ಎ2 ಆರೋಪಿ ದರ್ಶನ್‌ಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ಬಳಿಕ, ದರ್ಶನ್‌ ಪರ ವಕೀಲರು ಅನಾರೋಗ್ಯದ ಕಾರಣವನ್ನು ಮುಂದಿಟ್ಟುಕೊಂಡು ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸತತ ನಾಲ್ಕು ದಿನಗಳ ವಿಚಾರಣೆಯನ್ನು ನಡೆಸಿದ ನಂತರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವು ಇಂದು (ಅಕ್ಟೋಬರ್‌.30) 45 ದಿನಗಳ ಜಾಮೀನನ್ನು ಮಂಜೂರು ಮಾಡಿದೆ.

ಹೈಕೋರ್ಟ್‌ ವಿಧಿಸಿರುವ ಸಪ್ತ ಷರತ್ತುಗಳೇನು?
1. ಸೆಷೆನ್ಸ್‌ ನ್ಯಾಯಾಲಯಕ್ಕೆ ಪಾಸ್‌ ಪೋರ್ಟ್‌ ಸೆರೆಂಡರ್‌ ಮಾಡುವುದು ಹಾಗೂ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬಾರದು.
2. ಒಂದು ವಾರದಲ್ಲಿ ವೈದ್ಯಕೀಯ ದಾಖಲಾತಿ ವರದಿಯನ್ನು ಸಲ್ಲಿಸಬೇಕು.
3. ಎರಡು ಲಕ್ಷ ರೂಪಾಯಿ ಬಾಂಡ್‌
4. ಇಬ್ಬರು ಶ್ಯೂರಿಟಿದಾರರು
5. ಸಾಕ್ಷಿ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕಬಾರದು
6. ಸಾಕ್ಷಿ ನಾಶಕ್ಕೆ ಪ್ರಯತ್ನ ಮಾಡಬಾರದು.
7. ಜಾಮೀನಿನ ದುರುಪಯೋಗ ಮಾಡಿಕೊಳ್ಳುವಂತಿಲ್ಲ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago