Mysore
23
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್‌ ಪೂಜಾರಿಗೆ ಷರತ್ತುಬದ್ದ ಜಾಮೀನು!

ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಶ್ರೀಕಾಂತ್‌ ಪೂಜಾರಿಗೆ ಜಾಮೀನು ಮಂಜೂರು ಮಾಡಿದೆ.

ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ!: ಶ್ರೀಕಾಂತ್‌ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ ಶ್ರೀಕಾಂತ್‌ಗೆ ಬಿಡುಗಡೆ ಭಾಗ್ಯವಿಲ್ಲ. ಇಂದು ಸಂಜೆ ಜಾಮೀನು ಪ್ರತಿ ನಮ್ಮ ಕೈ ಸೇರಲಿದ್ದು, ನಾಳೆ ಸಂಜೆ ಒಳಗಾಗಿ ಶ್ರೀಕಾಂತ್‌ ಪೂಜಾರಿ ಬಿಡುಗಡೆ ಮಾಡಲಾಗುತ್ತದೆ ಎಂದು ಶ್ರೀಕಾಂತ್‌ ಪರ ವಕೀಲರು ತಿಳಿಸಿದ್ದಾರೆ.

೪೨ ಜನರ ಮೇಲೆ ಎಫ್‌ಐಆರ್‌ ದಾಖಲು: ಶ್ರೀಕಾಂತ್‌ ಪೂಜಾರಿ ಬಂಧನವನ್ನು ವಿರೋಧಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಹೋರಾಟ ನಡೆಸಿದರು. ಇದೀಗ ಬಿಜೆಪಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ೪೨ ಜನರ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಶ್ರೀಕಾಂತ್‌ ಪೂಜಾರಿ ಮೇಲೆ ೧೬ ಕೇಸ್‌ ಇತ್ತು ಅದರಲ್ಲಿ ಕೆಲವು ಕುಲಾಸೆ ಆಗಿದೆ. ಅಂತ ವ್ಯಕ್ತಿಗೆ ನೀವು ಇಷ್ಟು ಹೋರಾಟ ಮಾಡುತ್ತಿದ್ದೀರಿ ಎಂದರೆ ಏನು ಅರ್ಥ? ಅವನೊಬ್ಬನೇನಾ ಹಿಂದು? ಬಿಜೆಪಿಗರು ಬೇರೆ ಹಿಂದುಗಳಿಗಾಗಿ ಹೋರಾಟ ಮಾಡುತ್ತಿಲ್ಲ.  ಇದು ಕೇವಲ ರಾಜಕೀಯ ಉದ್ದೇಶದಿಂದ ಹೋರಾಟ ಮಾಡುತ್ತಿದ್ದಾರೆ.
– ಡಾ.ಜಿ.ಪರಮೇಶ್ವರ್‌, ಗೃಹ ಸಚಿವರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!