ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಮಲಾ ಹಂಪಲಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು, ಅಭಿಮಾನಿ ಬಳಗ ಹಾಗೂ ಸಾಹಿತ್ಯ ಆಸಕ್ತರಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಕಮಲಾ ಹಂಪನಾ ಅವರಿಗೆ ಸಂತಾಪ ಸೂಚಿಸಿದ್ದು, ಆರು ದಶಕಕ್ಕೂ ಹೆಚ್ಚು ಕಾಲ ಸಾಹಿತ್ಯ ಕೃಷಿಯಲ್ಲಿ ತೊಡಗಿ, ಅಧ್ಯಾಪನ ಮತ್ತು ಸಂಶೋಧನೆಯಲ್ಲಿ ದೊಡ್ಡ ಹೆಸರಾಗಿರುವ ನಾಡೋಜ ಕಮಲಾ ಹಂಪನಾ ಅವರ ನಿಧನದ ವಾರ್ತೆ ಕೇಳಿ ಬಹಳ ನೋವಾಯಿತು ಎಂದು ಶೋಕ ಸಂದೇಶ ತಿಳಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದಲ್ಲಿ ಮಹಿಳಾ, ಜೀವನವ ಪರ ಸಂವೇದನೆಗಳ ಪ್ರತೀಕವಾಗಿದ್ದ ಅವರು ಅರವತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚನೆ ಮಾಡಿದ್ದಾರೆ. ಅವರ ಅಗಲಿಕೆ ಕನ್ನಡಕ್ಕೆ ಬಹುದೊಡ್ಡ ನಷ್ಟ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರು, ಅಭಿಮಾನಿಗಳಿಗೆ ನೀಡಲು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯ ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ಅವರು ಕಮಲಾ ಹಂಪನಾ ಅವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕನ್ನಡ ಸಾಹಿತ್ಯ ಲೊಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಿದಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…