ರಾಜ್ಯ

ಕಮಲ ಹಂಪನ ನಿಧನ: ಡಿಸಿಎಂ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಮಲಾ ಹಂಪಲಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು, ಅಭಿಮಾನಿ ಬಳಗ ಹಾಗೂ ಸಾಹಿತ್ಯ ಆಸಕ್ತರಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.‌

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಕಮಲಾ ಹಂಪನಾ ಅವರಿಗೆ ಸಂತಾಪ ಸೂಚಿಸಿದ್ದು, ಆರು ದಶಕಕ್ಕೂ ಹೆಚ್ಚು ಕಾಲ ಸಾಹಿತ್ಯ ಕೃಷಿಯಲ್ಲಿ ತೊಡಗಿ, ಅಧ್ಯಾಪನ ಮತ್ತು ಸಂಶೋಧನೆಯಲ್ಲಿ ದೊಡ್ಡ ಹೆಸರಾಗಿರುವ ನಾಡೋಜ ಕಮಲಾ ಹಂಪನಾ ಅವರ ನಿಧನದ ವಾರ್ತೆ ಕೇಳಿ ಬಹಳ ನೋವಾಯಿತು ಎಂದು ಶೋಕ ಸಂದೇಶ ತಿಳಿಸಿದ್ದಾರೆ.

ಕನ್ನಡ ಸಾರಸ್ವತ ಲೋಕದಲ್ಲಿ ಮಹಿಳಾ, ಜೀವನವ ಪರ ಸಂವೇದನೆಗಳ ಪ್ರತೀಕವಾಗಿದ್ದ ಅವರು ಅರವತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚನೆ ಮಾಡಿದ್ದಾರೆ. ಅವರ ಅಗಲಿಕೆ ಕನ್ನಡಕ್ಕೆ ಬಹುದೊಡ್ಡ ನಷ್ಟ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರು, ಅಭಿಮಾನಿಗಳಿಗೆ ನೀಡಲು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯ ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ಅವರು ಕಮಲಾ ಹಂಪನಾ ಅವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕನ್ನಡ ಸಾಹಿತ್ಯ ಲೊಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ‌ ನೀಡಿದಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

5 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

10 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

14 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

14 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

14 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

17 hours ago