ರಾಜ್ಯ

ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರ ಸಂತಾಪ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಹಿತ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸಂದೇಶದಲ್ಲಿ, ಡಾ. ಎಸ್.ಎಲ್. ಭೈರಪ್ಪರ ಅಗಲಿಕೆಯಿಂದ ನಾವು ನಮ್ಮ ಆತ್ಮಸಾಕ್ಷಿಯನ್ನು ತಟ್ಟಿದ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಮಹಾನ್ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕರಾಗಿದ್ದು, ತಮ್ಮ ಗಂಭೀರ ಮತ್ತು ಚಿಂತನಶೀಲ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಅಪಾರವಾಗಿ ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿವೆ ಎಂದು ಹೇಳಿದ್ದಾರೆ.

ಇತಿಹಾಸ ಮತ್ತು ಸಂಸ್ಕೃತಿಯ ಕುರಿತ ಅವರ ಅಪಾರ ಆಸಕ್ತಿ ಮತ್ತು ಬದ್ಧತೆ ಮುಂದಿನ ಅನೇಕ ವರ್ಷಗಳವರೆಗೆ ಜನಮನಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ ಎಂದು ಪ್ರಧಾನಮಂತ್ರಿ ಪ್ರಶಂಸಿಸಿದ್ದಾರೆ.

ಇದನ್ನು ಓದಿ :  ಪದ್ಮಭೂಷಣ, ನಾಡಿನ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಇನ್ನಿಲ್ಲ

“ಈ ದುಃಖದ ಸಂದರ್ಭದಲ್ಲಿ ನನ್ನ ಸಂತಾಪಗಳು ಅವರ ಕುಟುಂಬ, ಬಂಧುಬಳಗ ಮತ್ತು ಅಭಿಮಾನಿಗಳೊಂದಿಗೆ ಇವೆ” ಎಂದು ಪ್ರಧಾನಿ ಮೋದಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ”ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.

”ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು” ಎಂದು ಕಂಬನಿ ಮಿಡಿದಿದ್ದಾರೆ

ಡಿಸಿಎಂ ಡಿ.ಕೆ.ಶಿವಕುಮಾರ್, “ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್‌ ಎಲ್‌ ಬೈರಪ್ಪ ಅವರ ಸಾವು ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನೂ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago