Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಭೂಕುಸಿತ ಅಧ್ಯಯನ ನಡೆಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

eshwar khandre

ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ.

ಇದನ್ನೂ ಓದಿ:- 103 ಅಡಿ ತಲುಪಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ರೈತರ ಮೊಗದಲ್ಲಿ ಮಂದಹಾಸ

ಆಸ್ತಿಹಾನಿ, ಬೆಳೆಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿಯಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಿ ಎಂದು ಸೂಚನೆ ನೀಡಿದ್ದಾರೆ.

Tags:
error: Content is protected !!