eshwar khandre
ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ.
ಇದನ್ನೂ ಓದಿ:- 103 ಅಡಿ ತಲುಪಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ: ರೈತರ ಮೊಗದಲ್ಲಿ ಮಂದಹಾಸ
ಆಸ್ತಿಹಾನಿ, ಬೆಳೆಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿಯಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಿ ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…