ಹಾಸನ(ಸಕಲೇಶಪುರ): ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಈ ಯೋಜನೆಯ ಪರಿಷ್ಕೃತ ಅಂದಾಜು 23252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16152ಕೋಟಿ ರೂ.ಗಳನ್ನು ವೆಚ್ಚ ವಾಗಿದ್ದು, ಇನ್ನುಳಿದ 6-7ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.
ಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು,ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…