Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಅಭಿನಂದನಾ ಸಮಾವೇಶ

ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಬೃಹತ್‌ ಮತದಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್‌, ಇಂದು ಅಭಿನಂದನಾ ಸಮಾವೇಶವನ್ನು ಆಯೋಜನೆ ಮಾಡಿತ್ತು.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪಚುನಾವಣೆಯಲ್ಲಿ ಬಿಜೆಪಿಯ ಮುಖಂಡರಿಂದ ಹಿಡಿದು ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ಮಾಡಲಿಲ್ಲ ಎಂದರು.

ಇನ್ನು ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್‌ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ ಎಂದರು.

ಕಾಂಗ್ರೆಸ್‌ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

Tags: