ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಬೃಹತ್ ಮತದಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್, ಇಂದು ಅಭಿನಂದನಾ ಸಮಾವೇಶವನ್ನು ಆಯೋಜನೆ ಮಾಡಿತ್ತು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪಚುನಾವಣೆಯಲ್ಲಿ ಬಿಜೆಪಿಯ ಮುಖಂಡರಿಂದ ಹಿಡಿದು ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ಮಾಡಲಿಲ್ಲ ಎಂದರು.
ಇನ್ನು ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ ಎಂದರು.
ಕಾಂಗ್ರೆಸ್ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…