ನವದೆಹಲಿ: ಇದೇ ಜೂನ್.13 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಾಂಗ್ರೆಸ್ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಊಹೆಯಂತೆ ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದು, ಅಚ್ಚರಿಯಂಬಂತೆ ಬಿಲ್ಕಿಸ್ ಭಾನು ಅವರಿಗೆ ಮಣೆ ಹಾಕಿದೆ.
ವಿಧಾನ ಸಭೆಯ ಸಂಖ್ಯಾಬಲದ ಆಧಾರದಲ್ಲಿ ಒಟ್ಟು 11 ಸ್ಥಾನಗಳಲ್ಲಿ 7 ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬೀಳಲಿವೆ. ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಗೆ ಮೂರು ಹಾಗೂ ಜೆಡಿಎಸ್‌ಗೆ ಒಂದು ಸ್ಥಾನ ಸಿಗಲಿದೆ.
ಇನ್ನು ಅತೀ ಜಾಣ್ಮೆಯಿಂದ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಕಾಂಗ್ರೆಸ್ ಎಲ್ಲಾ ಜಾತಿಯನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ತನ್ನ ಅಹಿಂದಾ ತತ್ವವನ್ನು ಎತ್ತಿ ಹಿಡಿದಿದೆ. ಇನ್ನು ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಯತೀಂದ್ರ ಸಿದ್ದರಾಮಯ್ಯ (ಕುರುಬ), ಗೋವಿಂದರಾಜು (ಒಕ್ಕಲಿಗ), ಬಿಲ್ಕಿಸ್ ಭಾನು (ಮುಸ್ಲಿಂ), ಐವಾನ್ ಡಿಸೋಜಾ (ಕ್ರಿಶ್ಚಿಯನ್), ವಸಂತ ಕುಮಾರ್ (ಎಸ್ಸಿ), ಬೋಸರಾಜ್ (ಕ್ಷತ್ರೀಯ), ಬಸನಗೌಡ ಬಾದರ್ಲಿ (ಲಿಂಗಾಯಿತ), ಜಯದೇವ ಗುತ್ತೇದಾರ್ (ಈಡಿಗ)
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…