ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು ಮೇ ೧೩ ರ ಸೋಮವಾರ ಬೆಳಿಗ್ಗೆ 10.00 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ನಗರದ ಶಾಂತಿನಗರ ಡಬಲ್ ರೋಡ್‌ನ ಬಿಎಂಟಿಸಿ ಬಿಲ್ಡಿಂಗ್ ನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರು ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





