ರಾಜ್ಯ

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.

ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಇದು ಹೈಕಮಾಂಡ್‌ ನಿರ್ಧಾರ. ಇದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ವರಾಹಿ ಯೋಜನೆ : ಯಾರಿಗೂ ಅನ್ಯಾಯ ಆಗಲು ಬಿಡಲ್ಲ
ವರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇನ್ನು ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

38 mins ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

2 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

3 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

3 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

3 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

4 hours ago